ಎ.5ರಂದು ಸಚಿವ ವೆಂಕಟೇಶ್ ಉಡುಪಿಗೆ

Update: 2025-04-03 19:33 IST
ಎ.5ರಂದು ಸಚಿವ ವೆಂಕಟೇಶ್ ಉಡುಪಿಗೆ
  • whatsapp icon

ಉಡುಪಿ, ಎ.3: ರಾಜ್ಯ ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ. ವೆಂಕಟೇಶ್ ಅವರು ಎ.5ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಶನಿವಾರ ಅಪರಾಹ್ನ 1:00 ಗಂಟೆಗೆ ಉಡುಪಿಗೆ ಆಗಮಿಸುವ ಸಚಿವರು 2:15ಕ್ಕೆ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೈತ್ರಿ ಕಾರ್ಯಕರ್ತರ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ 3:30ಕ್ಕೆ ಕಾಪುನಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 4:30ಕ್ಕೆ ಕಾಪುವಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News