ಎ.5: ಮೈತ್ರಿ ಕಾರ್ಯಕರ್ತರ ತರಬೇತಿ ಉದ್ಘಾಟನೆ
ಉಡುಪಿ, ಎ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮೈತ್ರಿ ಕಾರ್ಯಕರ್ತರ ತರಬೇತಿಯ ಉದ್ಘಾಟನೆ ಎ.5ರ ಶನಿವಾರ ಅಪರಾಹ್ನ 2:00 ಗಂಟೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ್ ಭಾಗವಹಿಸಲಿ ದ್ದಾರೆ. ಜಿಲ್ಲೆಯ ಸಂಸದರು, ಶಾಸಕರೊಂದಿಗೆ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ವಿ.ಅನ್ಬುಕುಮಾರ್ ಭಾಗವಹಿಸುವರು.
ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆಯುಕ್ತೆ ಶ್ರೀರೂಪಾ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕ ಡಾ. ಮಂಜುನಾಥ್ ಎಸ್ ಪಾಳೇಗಾರ್ ಮತ್ತಿತರರು ಉಪಸ್ಥಿತರಿರುವರು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.