ಡಿ.6: ವಿಪಕ್ಷ ನಾಯಕ ಆರ್. ಅಶೋಕ್ ಉಡುಪಿಗೆ

Update: 2024-12-04 15:38 GMT

ಉಡುಪಿ, ಡಿ.4: ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ಡಿ.6ರ ಬೆಳಿಗ್ಗೆ ಗಂಟೆ 10:30ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ವಕ್ಫ್ ಬೋರ್ಡ್ ಕಾನೂನಿನಡಿಯಲ್ಲಿ ರೈತರು ಹಾಗೂ ಸಾರ್ವಜನಿಕರಿಗೆ ಉದ್ಭವಿಸಬಹುದಾದ ಸಂಕಷ್ಟಗಳ ಕುರಿತು ಸಂಬಂಧಿತ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.

ಬಳಿಕ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News