ಜ.6: ವಿಕಲಚೇತನ, ಹಿರಿಯ ನಾಗರಿಕರಿಗೆ ಸಾಧನ-ಸಲಕರಣೆಗಳ ವಿತರಣೆ

Update: 2024-12-31 15:31 GMT

ಉಡುಪಿ: ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಪ್ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿಯಲ್ಲಿ ಕಳೆದ ಜುಲೈ 10ರಿಂದ 18ರವರೆಗೆ ಉಡುಪಿ ಜಿಲ್ಲೆಯಲ್ಲಿ ನಡೆದ ಮೌಲ್ಯಮಾಪನಾ ಶಿಬಿರದಲ್ಲಿ ಆಯ್ಕೆಯಾದ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ಸಾಧನ- ಸಲಕರಣೆಗಳನ್ನು ಜ.6ರಂದು ವಿತರಿಸಲಾಗುತ್ತದೆ.

ಜಿಲ್ಲೆಯಲ್ಲಿ ನಡೆದ ಮೌಲ್ಯಮಾಪನಾ ಶಿಬಿರದಲ್ಲಿ 426 ಮಂದಿ ವಿಕಲಚೇತನರು ಹಾಗೂ 283 ಮಂದಿ ಹಿರಿಯ ನಾಗರಿಕರು ವಿವಿಧ ಸಾಧನ ಸಲಕರಣೆಗಳನ್ನು ಪಡೆಯಲು ಅಲಿಂಕೋ ಸಂಸ್ಥೆಯಿಂದ ಆಯ್ಕೆಯಾಗಿದ್ದು, ಹೀಗೆ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜ.6ರಂದು ಬೆಳಗ್ಗೆ 10:30ಕ್ಕೆ ಸಾಧನ-ಸಲಕರಣೆಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ತಿಳಿಸಿದ್ದಾರೆ.

ಆಯ್ಕೆಯಾದ ವಿಕಲಚೇತನ ಹಾಗೂ ಹಿರಿಯ ನಾಗರಿಕ ಫಲಾನುಭವಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಆಗಮಿಸುವ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ತರುವಂತೆ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಳಾಗಿ ತಾಲೂಕು ವ್ಯಾಪ್ತಿಯಲ್ಲಿ ಎಂಆರ್‌ಡಬ್ಲ್ಯೂ, ಗ್ರಾಪಂ ವ್ಯಾಪ್ತಿಯಲ್ಲಿ ವಿಆರ್‌ಡಬ್ಲ್ಯೂ, ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿ ಯಲ್ಲಿ ಯುಆರ್‌ಡಬ್ಲ್ಯೂ ಅಥವಾ ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದು. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 0820- 2574810 (ಜಿಲ್ಲಾ ಕಚೇರಿ), 0820-2533372(ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ), 0820-2526394 (ಹಿರಿಯ ನಾಗರಿಕರ ಸಹಾಯವಾಣಿ) ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News