ಜ.6ರಂದು ವಿಕಲಚೇತನರಿಗೆ, ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಣೆ
ಉಡುಪಿ, ಜ.4: ಜಿಲ್ಲಾಡಳಿತ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗ ದೊಂದಿಗೆ ಅಲಿಂಕೋ ಸಂಸ್ಥೆ ವತಿಯಿಂದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಜನವರಿ 6ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಸಂಸದರು, ಶಾಸಕರು, ಗಣ್ಯರೊಂದಿಗೆ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಪಂ ಸಿಇಓ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರತ್ನ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.