ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ ಕಚೇರಿ

Update: 2024-08-19 15:18 GMT

ಉಡುಪಿ, ಆ.19: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅನ್ವಯ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಯನ್ನು ಶೇ.60ರಷ್ಟು ಪ್ರದರ್ಶಿಸುವುದನ್ನು ಕಡ್ಡಾಯವಾಗಿ ಜಾರಿಗೊಳಿಸಲು ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸದೇ ಇರುವುದು ಪರಿಶೀಲನೆ ವೇಳೆ ಕಂಡುಬಂದಿದ್ದು, ನಿಯಮವನ್ನು ಪಾಲಿಸದೇ ಇರುವ ಸಂಘ, ಸಂಸ್ಥೆ ಹಾಗೂ ಘಟಕಗಳಿಗೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅನ್ವಯ ಮೊದಲನೇಯ ಅಪರಾಧಕ್ಕಾಗಿ 5,000 ರೂ.ವರೆಗೆ ವಿಸ್ತರಿಸಬಹುದಾದ ಜುಲ್ಮಾನೆ, ಎರಡನೇಯ ಅಪರಾಧಕ್ಕಾಗಿ 10,000 ರೂ.ವರೆಗೆ ವಿಸ್ತರಿಸಬಹುದಾದ ಜುಲ್ಮಾನೆ ಹಾಗೂ ನಂತರದ ಪ್ರತಿಯೊಂದು ಅಪರಾಧಕ್ಕಾಗಿ 20,000 ರೂ. ವರೆಗೆ ವಿಸ್ತರಿಸಬಹುದಾದ ಜುಲ್ಮಾನೆ ವಿಧಿಸುವುದರೊಂದಿಗೆ ಪರವಾನಿಗೆ ಯನ್ನು ಸಹ ರದ್ದುಗೊಳಿಸಬಹುದಾಗಿದೆ.

ಆದ್ದರಿಂದ ಜಿಲ್ಲೆಯಲ್ಲಿ ನಾಮಫಲಕಗಳಲ್ಲಿ ಸಂಘ, ಸಂಸ್ಥೆ ಹಾಗೂ ಘಟಕದ ಹೆಸರು ಮತ್ತು ವಿಳಾಸವನ್ನು ಕನ್ನಡಭಾಷೆಯಲ್ಲಿ ಫಲಕಗಳ ಮೇಲ್ಭಾಗದಲ್ಲಿ ಶೇ.60 ರಷ್ಟು ಪ್ರದರ್ಶಿಸುವ ಮೂಲಕ ಪರಿಷ್ಕೃತ ಫಲಕವನ್ನು ಆಗಸ್ಟ್ 30ರೊಳಗೆ ಅಳವಡಿಸಬೇಕು. ನಂತರದ ದಿನಗಳಲ್ಲಿ ತಪಾಸಣೆ ಸಂದರ್ಭದಲ್ಲಿ ನಾಮಫಲಕದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಮೇಲೆ ವಿವರಿಸಿ ರುವ ದಂಡನೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News