ಅ.7ಕ್ಕೆ ಸೀತಾನದಿ ಯಕ್ಷಗಾನ ಪ್ರಶಸ್ತಿ ಪ್ರದಾನ

Update: 2024-10-05 13:52 GMT

ಉಡುಪಿ, ಅ.5: ಕಾರ್ಕಳ ಬೈಲೂರಿನ ಸೀತಾನದಿ ಗಣಪಯ್ಯ ಶೆಟ್ಟಿ ಪ್ರತಿಷ್ಠಾನದ 37ನೆಯ ವರ್ಷದ ಸಂಸ್ಮರಣೆ -ಪ್ರಶಸ್ತಿ ಪ್ರದಾನ ಸಮಾರಂಭವು ಅ.7ರ ಸೋಮವಾರದಂದು ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯ ಲಿದೆ. ಪ್ರಶಸ್ತಿಯನ್ನು ತೆಂಕುತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದರೂ, ರಾಜ್ಯಪ್ರಶಸ್ತಿ ವಿಜೇತರೂ ಆದ ಕೆ.ಗೋವಿಂದ ಭಟ್ ಸೂರಿಕುಮೇರು ಇವರಿಗೆ ಪ್ರದಾನ ಮಾಡಲಾಗುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀತಾನದಿ ಗಣಪಯ್ಯ ಶೆಟ್ಟಿ ಪ್ರತಿಷ್ಠಾನದ ಅಧ್ಯಕ್ಷರಾದ ಪಿ.ಕಿಶನ್ ಹೆಗ್ಡೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಮಾಹೆಯ ಪ್ರೊಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಲಕ್ಷ್ಮೀನಾರಾಯಣ ಕಾರಂತ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಉಪಸ್ಥಿತರಿವರು.

ಸೀತಾನದಿ ಗಣಪಯ್ಯ ಶೆಟ್ಟಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಸ್. ಅಶೋಕ್ ಕುಮಾರ್ ಶೆಟ್ಟಿ, ಮುಂಬೈನ ಪೊಲ್ಯ ಉಮೇಶ ಶೆಟ್ಟಿ ಸೀತಾನದಿ ಸಂಸ್ಮರಣೆ ಮಾಡಲಿದ್ದಾರೆ. ಪ್ರಶಸ್ತಿ ಪುರಸ್ಕೃತರ ಕುರಿತಂತೆ ಮಣಿಪಾಲ ಎಂಐಟಿ ಪ್ರಾದ್ಯಾಪಕ ರಾದ ಎಸ್.ಉದಯಕುಮಾರ್ ಶೆಟ್ಟಿ ಅಭಿನಂದನಾ ಭಾಷಣ ಮಾಡಲಿರುವರು. ಸಭಾ ಕಾರ್ಯಕ್ರಮದ ಬಳಿಕ ಇಂದ್ರಾಳಿ ಯಕ್ಷಗಾನ ಕೇಂದ್ರ ಹಾಗೂ ಯಕ್ಷರಂಗದ ಕಲಾವಿದರಿಂದ ವೀರ ಬಭ್ರುವಾಹನ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News