ನ.9ರಿಂದ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
ಉಡುಪಿ, ನ.5: ಪರ್ಯಾಯ ಪುತ್ತಿಗೆ ಮಠ, ಶ್ರೀವಾದಿರಾಜ ಸಂಶೋಧನಾ ಪ್ರತಿಷ್ಠಾನ, ಬೆಂಗಳೂರಿನ ಶ್ರೀನಿವಾಸ ಉತ್ಸವ ಬಳಗ ಸಂಯುಕ್ತ ಆಶ್ರಯದಲ್ಲಿ ಶ್ರೀವಿಜಯ ದಾಸರ ಆರಾಧನಾ ಅಂಗವಾಗಿ ಹರಿದಾಸ ಸಾಹಿತ್ಯ ಅಂತಾ ರಾಷ್ಟ್ರೀಯ ಸಮ್ಮೇಳನ, ಶ್ರೀನಿವಾಸ ಕಲ್ಯಾಣ ಮಹೋತ್ಸವ, ಸಹಸ್ರ ಕಂಠ ಗಾಯನ - ಭಜನಾ ಮಂಡಳಿಗಳ ಸಮಾವೇಶ, ಮಧ್ವ ಪುರಂದರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ನ.9ರಿಂದ 11ರವರೆಗೆ ರಾಜಾಂಗಣದಲ್ಲಿ ಆಯೋಜಿಸಲಾಗಿದೆ
ಸಮ್ಮೇಳನವನ್ನು ನ.9ರಂದು ಬೆಳಿಗ್ಗೆ 9:30ಕ್ಕೆ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಲಿರುವರು. ಬೆಂಗಳೂರು ಬೇಲಿ ಮಠದ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ದಿಕ್ಸೂಚಿ ಭಾಷಣವನ್ನು ಮಾಡಲಿರುವರು. ದಾಸ ಸಾಹಿತ್ಯ ಸಂಶೋಧಕ ಡಾ. ಎ.ಬಿ.ಶ್ಯಾಮಾಚಾರ್ಯ ಅಧ್ಯಕ್ಷತೆ ವಹಿಸಲಿರುವರು.
10ರಂದು ಬೆಳಗ್ಗೆ 9ರಿಂದ ತಿರುಮಲ ಶ್ರೀನಿವಾಸನ ವೈಭವದ ಕಲ್ಯಾಣ ಮಹೋತ್ಸವ- ಶ್ರೀನಿವಾಸ ಉತ್ಸವ ಬಳಗದ ತಾಯಲೂರು ವಾದಿರಾಜ ನೇತೃತ್ವದಲ್ಲಿ ಡಾ.ಬಿ.ಗೋಪಾಲಾಚಾರ್ಯರ ವ್ಯಾಖ್ಯಾನ, ವಿದ್ವಾನ್ ಡಾ. ರಾಯಚೂರು ಶೇಷಗಿರಿ ದಾಸ್ ಮತ್ತು ವಿದುಷಿ ಶುಭ ಸಂತೋಷರವರ ಗಾಯನದೊಂದಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.