ಎ.9ರಂದುಕೇಂದ್ರ ಸರಕಾರದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ
Update: 2025-04-08 20:35 IST

ಉಡುಪಿ: ಕೇಂದ್ರ ಸರಕಾರದಿಂದ ಇಂಧನ ಮತ್ತು ಎಲ್‌ಪಿಜಿ ಬೆಲೆ ಏರಿಕೆ ವಿರೋಧಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್, ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಎ.9ರಂದು ಸಂಜೆ 4.30 ಗಂಟೆಗೆ ಉಡುಪಿ ಅಜ್ಜರಕಾಡು ಮಹಾತ್ಮ ಗಾಂಧಿ ಸ್ಮಾರಕದ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಪೆಟ್ರೊಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2ರೂ.ಗೆೆ ಹೆಚ್ಚಿಸುವ ಮತ್ತು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 50ರೂ. ಹೆಚ್ಚಿಸುವ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವನ್ನು ಯುವ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ. ಈ ಬೆಲೆ ಏರಿಕೆಗಳು ಈಗಾಗಲೇ ಹಣದುಬ್ಬರ ಮತುತಿ ನಿರುದ್ಯೊಗ ದಿಂದ ಬಳಲುತ್ತಿರುವ ಸಾಮಾನ್ಯ ಜನರು, ರೈತರು, ದಿನಗೂಲಿ ಕಾರ್ಮಿಕರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಭಾರಿ ಹೊರೆಯಾಗಿದೆ ಎಂದು ಯುವಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.