ಪ್ರತ್ಯೇಕ ಪ್ರಕರಣ: ನಾಲ್ವರ ಆತ್ಮಹತ್ಯೆ

Update: 2023-07-31 16:04 GMT

ಉಡುಪಿ, ಜು.31: ಅಧಿಕ ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದ ದಾವಣಗೆರೆ ಮೂಲದ ಕುತ್ಪಾಡಿ ನಿವಾಸಿ ಗುಲಾಬಿ(51) ಎಂಬವರು ಮಾನಸಿಕ ವಾಗಿ ಮನನೊಂದು ಜು.30ರಂದು ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ: ಕುಡಿತದ ಚಟದಿಂದ ಹಣದ ಅಡಚಣೆಯ ಬಗ್ಗೆ ಜೀವನದಲ್ಲಿ ಜಿಗುಪ್ಸೆಗೊಂಡು ಜು.22ರಂದು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯಗೆ ಯತ್ನಿಸಿದ್ದ 80 ಬಡಗಬೆಟ್ಟು ಗ್ರಾಮದ ಶಾಂತಿನಗರದ ಮಣಿಕಂಠ (24) ಎಂಬವರು ಜು.30ರಂದು ಬೆಳಗ್ಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಲ್ತೋಡು ಗ್ರಾಮದ ಯಡೇರಿ ನಿವಾಸಿ ಸುಜಾತ(48) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜು.30ರಂದು ಮಧ್ಯಾಹ್ನ ಮನೆಯ ಕೊಟ್ಟಿಗೆಯ ಕಬ್ಬಿಣದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ನಿಡ್ಲಾಡಿಯ ಗಾವಳಿಯ ಕ್ರಶರ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಬಿಹಾರ್ ಮೂಲದ ಬಿಟ್ಟು ಕುಮಾರ್ (20) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಜು.30ರಂದು ರಾತ್ರಿ ವೇಳೆ ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News