ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2023-08-19 13:41 GMT

ಕಾರ್ಕಳ, ಆ.19: ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದ ಬೈಲೂರು ನಾಯರಬೆಟ್ಟು ನಿವಾಸಿ ಶಿವಾನಂದ(38) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಆ.18ರಂದು ರಾತ್ರಿ ಮನೆಯ ಹತ್ತಿರ ಇರುವ ಸರಕಾರಿ ಬಾವಿಯ ಅಡ್ಡ ರಾಡ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಮುಂಗೋಪ ಹಾಗೂ ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆ ಗೊಂಡ ಬಸ್ರೂರು ಗ್ರಾಮದ ಮೂಡ್ಕೇರಿ ದೊಟ್ಟೆಕಾಲು ನಿವಾಸಿ ಜಗದೀಶ ಬಿ.(35) ಎಂಬವರು ಆ.17ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News