ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2023-09-20 16:10 GMT

ಮಲ್ಪೆ, ಸೆ.20: ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಯಿಂದ ಮನನೊಂದ ಕೆಳಾರ್ಕಳಬೆಟ್ಟು ವಿಷ್ಣುಮೂರ್ತಿ ನಗರದ ಅಶ್ರಫ್(53) ಎಂಬವರು ಜೀವನ ದಲ್ಲಿ ಜಿಗುಪ್ಸೆಗೊಂಡು ಸೆ.19ರಂದು ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡ್ಕ: ಹೊಟ್ಟೆನೋವಿನಿಂದ ಬಳಲುತ್ತಿದ್ದ ಹಿರಿಯಡ್ಕ ಸರಕಾರಿ ಕಾಲೇಜಿನ ಹಿಂಬದಿ ನಿವಾಸಿ ಕೃಷ್ಣ ಶೇರಿಗಾರ್(78) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.19ರಂದು ರಾತ್ರಿ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News