ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2023-10-15 14:39 GMT

ಶಂಕರನಾರಾಯಣ: ಮದ್ಯ ಸೇವನೆ ಚಟ ಹಾಗೂ ವಿಪರೀತ ಸಾಲದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕುಳುಂಜೆ ಗ್ರಾಮದ ಸಂದೀಪ್ ಪೂಜಾರಿ(32) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.14ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ತನ್ನ ಗಂಡ ಮೃತಪಟ್ಟ ಬಗ್ಗೆ ಹಾಗೂ ಮಕ್ಕಳು ಇಲ್ಲದ ಚಿಂತೆಯಲ್ಲಿ ಮಾನಸಿಕವಾಗಿ ನೊಂದ ವಿಜಯ ಉಮೇಶ್ (56)ಎಂಬವರು ಅ.14ರಂದು ಬೆಳಗ್ಗೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News