ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2023-10-19 15:13 GMT

ಕಾರ್ಕಳ, ಅ.19: ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಪೆರ್ವಾಜೆಯ ಪ್ರೀತಂ ಎಂ.(38) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನೆರೆಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಮೃತದೇಹ ಅ.19 ರಂದು ಬೆಳಗ್ಗೆ ಪತ್ತೆಯಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಲ್ಲೂರು: ಮೂರು ತಿಂಗಳ ಹಿಂದೆ ಮೃತಪಟ್ಟ ತಾಯಿಯ ಚಿಂತೆಯಲ್ಲಿ ಮಾನಸಿಕವಾಗಿ ನೊಂದ ನಲ್ಲೂರು ಗ್ರಾಮದ ನಡಾಯಿಪಲ್ಕೆ ನಿವಾಸಿ ಸುರೇಂದ್ರ ಶೆಟ್ಟಿ (38) ಎಂಬವರು ಅ.19ರಂದು ಬೆಳಗ್ಗೆ ಮನೆ ಸಮೀಪದ ಹಾಡಿಯಲ್ಲಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News