ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2024-08-21 16:07 GMT

ಹೆಬ್ರಿ, ಆ.21: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಬೆಳಂಜೆ ಗ್ರಾಮದ ಜಾರ್ಮಕ್ಕಿ ನಿವಾಸಿ ಸುಬ್ಬಣ್ಣ(52) ಎಂಬವರು ಜೀವನ ದಲ್ಲಿ ಜಿಗುಪ್ಸೆಗೊಂಡು ಆ.20ರಂದು ಸಂಜೆ ವೇಳೆ ಮನೆಯ ಕೊಟ್ಟಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಕಾಡೂರು ಗ್ರಾಮದ ಗೋಪಾಲ(32) ಎಂಬವರು ಆ.16ರಂದು ಮನೆಬಿಟ್ಟು ಹೋಗಿದ್ದು, ಆ.20ರಂದು ಸಂಜೆ ವೇಳೆಗೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News