ಉಡುಪಿಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದ ಪಾಲ್ಘಾಟ್ ನಲ್ಲಿ ಪತ್ತೆ

Update: 2024-09-09 10:57 IST
ಉಡುಪಿಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದ ಪಾಲ್ಘಾಟ್ ನಲ್ಲಿ ಪತ್ತೆ
  • whatsapp icon

ಉಡುಪಿ, ಸೆ.9: ಕಡಿಯಾಳಿಯ ಕೋಚಿಂಗ್ ಸೆಂಟರ್ ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ರವಿವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಆಕಾಶ್ ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಆರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದನು. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲಿನ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂತು. ಅತ್ತ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರ್ಯನನ್ನು ಪಾಲ್ಘಾಟ್ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ತಿಳಿದ ಉಡುಪಿ ಪೊಲೀಸರು ಪಾಲ್ಘಾಟ್ ಗೆ ತೆರಳಿದ್ದಾರೆಂದು ತಿಳಿದುಬಂದಿದೆ

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News