ಅ.20: ಕಾಂಗ್ರೆಸ್‌ನಿಂದ ರಕ್ತದಾನ ಶಿಬಿರ

Update: 2023-10-18 13:37 GMT

ಉಡುಪಿ, ಅ.18: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಅ.20ರ ಶುಕ್ರವಾರ ಬೆಳಗ್ಗೆ 8:30ರಿಂದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿದೆ.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ಕೊರತೆ ಇರುವುದನ್ನು ಮನಗಂಡು ಅಲ್ಲಿನ ಅರ್ಥಿಕ ಅಶಕ್ತ ರೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಹಮ್ಮಿ ಕೊಂಡಿರುವ ಈ ರಕ್ತದಾನ ಶಿಬಿರದಲ್ಲಿ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡು ವುದರ ಮೂಲಕ ಈ ಶಿಬಿರವನ್ನು ಯಶಸ್ವಿಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News