ಉಡುಪಿ ಕಾಲೇಜು ಪ್ರಕರಣ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ, ತಳ್ಳಾಟ

Update: 2023-07-27 13:53 GMT

ಉಡುಪಿ: ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸಿದರು.

ನೂರಾರು ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಕಾರರು, ಪೊಲೀಸರು ಪ್ರಕರಣದ ತನಿಖೆಯ ದಾರಿ ತಪ್ಪಿಸುತ್ತಿದ್ದಾರೆಂದು ಆರೋಪಿಸಿ ಆಕ್ರೋಶ ವ್ಯಕ್ತ ಪಡಿಸಿದರು. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಮತ್ತು ಸಂತ್ರಸ್ತೆ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಶಾಸಕ ಯಶ್ಪಾಲ್ ಸುವರ್ಣ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಎಸ್ಪಿ ಕೂಡಲೇ ಸ್ಥಳಕ್ಕೆ ಆಗಮಿಸು ವಂತೆ ಪ್ರತಿಭಟನಕಾರರು ಪಟ್ಟು ಹಿಡಿದರು.

ಬಳಿಕ ಪ್ರತಿಭಟನಕಾರರು ರಸ್ತೆಯತ್ತ ನುಗ್ಗಿದ್ದು, ಈ ವೇಳೆ ಪೊಲೀಸರು ತಡೆದರು. ಈ ವೇಳೆ ಇಬ್ಬರ ಮಧ್ಯೆ ತಳ್ಳಾಟ ನಡೆಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಎಸ್ಪಿ ಅಕ್ಷಯ್ ಹಾಕೇ ಪ್ರತಿಭಟನಕಾರರನ್ನು ಸಮಾಧಾನ ಪಡಿಸಿದರು.

ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಮಾಡಲು ನಾವು ಬದ್ಧರಾಗಿದ್ದೇವೆ. ಮೊಬೈಲ್‌ನಲ್ಲಿ ವಿಡಿಯೋ ಡಿಲೀಟ್ ಆಗಿದ್ದರೆ ರಿಟ್ರಿ ಮಾಡಲು ಎಫ್‌ಎಸ್‌ಎಲ್‌ಗೆ ಕಳುಹಿಸ ಲಾಗುವುದು. ಬೇರೆ ಮೊಬೈಲ್‌ಗಳಿದ್ದರೆ ಅವುಗಳನ್ನು ಕೂಡ ವಶ ಪಡಿಸಿಕೊಂಡು ವಿವರವಾಗಿ ತನಿಖೆ ಮಾಡುತ್ತೇವೆ. ತನಿಖೆ ಸಂಬಂಧ ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ. ಪಾರದರ್ಶಕವಾಗಿ ತನಿಖೆ ನಡೆಸಲಾಗುವುದು ಎಂದು ಎಸ್ಪಿ ಭರವಸೆ ನೀಡಿದರು.




 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News