ಅತಿವೃಷ್ಟಿಯಿಂದ ಹಾನಿಗೊಳಗಾದ ಗದ್ದೆಗಳಿಗೆ ಕೃಷಿ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ

Update: 2024-08-19 21:05 IST
ಅತಿವೃಷ್ಟಿಯಿಂದ ಹಾನಿಗೊಳಗಾದ ಗದ್ದೆಗಳಿಗೆ ಕೃಷಿ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ
  • whatsapp icon

ಉಡುಪಿ, ಆ.19: ಕಳೆದ ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದ ಕಾಪು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ನೆರೆ ಉಂಟಾಗಿ ಬೆಳೆಹಾನಿಯಾದ ಪ್ರದೇಶಗಳಿಗೆ ಜಂಟಿ ಕೃಷಿ ನಿರ್ದೇಶಕ, ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಹಾಗೂ ಕಾಪು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈಗಾಗಲೇ ಸುಮಾರು 18 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿರುವ ಬಗ್ಗೆ ಅಂದಾಜಿಸಲಾಗಿದ್ದು, ಇದುವರೆಗೆ 7.42 ಹೆ.ನಷ್ಟು ಮಾತ್ರ ಬೆಳೆ ಹಾನಿ ಅರ್ಜಿ ಸ್ವೀಕೃತವಾಗಿದೆ. ಬೆಳೆ ನಷ್ಟಕೊಳಗಾದ ರೈತರು ಮಾಹಿತಿ ನೀಡಿದಲ್ಲಿ ಕಂದಾಯ ಇಲಾಖಾ ಅಧಿಕಾರಿಗಳೊಂದಿಗೆ ಕ್ಷೇತ್ರ ಭೇಟಿ ಮಾಡಿ ಮಾರ್ಗ ಸೂಚಿಯನ್ವಯ ಪರಿಹಾರ ಒದಗಿಸಲಾಗುವುದು ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News