ಅ.13 ಮತ್ತು 14ರಂದು ಕೃಷಿ ಸಚಿವರು ಉಡುಪಿ ಜಿಲ್ಲೆಯಲ್ಲಿ ಪ್ರವಾಸ

Update: 2023-10-12 14:47 GMT

ಉಡುಪಿ, ಅ.12: ರಾಜ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಅ.13 ಮತ್ತು 14ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅ.13ರಂದು ಸಂಜೆ ಕೊಲ್ಲೂರಿಗೆ ಆಗಮಿಸುವ ಸಚಿವರು ಅಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಅ.14ರಂದು ಬೆಳಗ್ಗೆ 7:30ಕ್ಕೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಸಚಿವರು 11:00ಗಂಟೆಗೆ ಬ್ರಹ್ಮಾವರದಲ್ಲಿ ನಡೆಯುವ ಕೃಷಿ ಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅಪರಾಹ್ನ 12:30ಕ್ಕೆ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ನಂತರ ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News