ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅವಕಾಶ
Update: 2023-09-11 15:45 GMT
ಉಡುಪಿ, ಸೆ.11: ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ, ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ ಸೆ.12ರಿಂದ 14ರವರೆಗೆ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಿದ್ದು, ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.