ಉಡುಪಿ ಶ್ರೀಕೃಷ್ಣ ಮಠಕ್ಕೆ 4.5ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಅರ್ಪಣೆ
Update: 2023-12-29 09:16 GMT
ಉಡುಪಿ, ಡಿ.29: ಉಡುಪಿ ಶ್ರೀಕಷ್ಣ ಮಠಕ್ಕೆ ತೆಲಂಗಾಣದ ಭಕ್ತ ಆರ್.ಸ್ವಾಮಿನಾಥನ್ ಎಂಬವರು ಸುಮಾರು 4.5 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಅರ್ಪಿಸಿದರು.
ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ ಅವರಿಗೆ ಭಕ್ತರು ಕಿರೀಟವನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.