ಡಿ. 1ರಂದು ಅಜೆಕಾರು ವಲಯ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ
Update: 2024-11-29 04:17 GMT
ಕಾರ್ಕಳ: ಕಾಡುಹೊಳೆ ಮರಾಠಿ ಸಮಾಜ ಸೇವಾ ಸಂಘ ಅಜೆಕಾರು ವಲಯ ಇದರ ವಾರ್ಷಿಕ ಮಹಾಸಭೆ ಹಾಗೂ ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಯು ಡಿ.1ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಕಾಡುಹೊಳೆ ನಿರ್ಮಾಣ ಹಂತದ ಮರಾಠಿ ಸಮುದಾಯ ಭವನದಲ್ಲಿ ಜರುಗಲಿದೆ.
ಇದಕ್ಕೂ ಮುನ್ನ ಬೆಳಗ್ಗೆ 7.30ಕ್ಕೆ ಸಂಘದ ಸಮುದಾಯ ಭವನದಲ್ಲಿ ಸತ್ಯನಾರಾಯಣ ಪೂಜೆ ನಡೆಯಲಿದೆ.
ಮಹಾಸಭೆಯ ಮುಖ್ಯ ಅತಿಥಿಗಳಾಗಿ ಕರ್ನಾಟಕ ಹೈಕೋರ್ಟ್ ನ್ಯಾಯವಾದಿ ಹಾಗೂ ಕರ್ನಾಟಕ ರಾಜ್ಯ ಮರಾಠಿ ಸಂಘ, ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಮುಗುಳಿ, ಮುಂಬಯಿ ಉದ್ಯಮಿ ಹಾಗೂ ಮರಾಠಿ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಅಜೆಕಾರು ಸುಧಾಕರ ನಾಯ್ಕ್ ಭಾಗವಹಿಸಲಿದ್ದು, ಸಂಘದ ಅಧ್ಯಕ್ಷ ಶೇಖರ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ