ಹುಟ್ಟೂರು ತಲುಪಿದ ಯೋಧ ಅನೂಪ್ ಪೂಜಾರಿ ಪಾರ್ಥಿವ ಶರೀರ

Update: 2024-12-26 06:50 GMT

ಕುಂದಾಪುರ: ಜಮ್ಮು-ಕಾಶ್ಮೀರದ ಪೂಂಛ್ ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯ ಅನೂಪ್ ಪೂಜಾರಿ ಪಾರ್ಥಿವ ಶರೀರ ಗುಉವಾರ ಅವರ ಹುಟ್ಟೂರು ಬೀಜಾಡಿಗೆ  ತಲುಪಿದೆ.

ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯ  ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಂತಿಮ ಯಾತ್ರೆಯ ಬಳಿಕ ಬೀಜಾಡಿಯ ಅವರ ಮನೆ ತಲುಪಿತು. ಅಂತಿಮ ಯಾತ್ರೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಅಂತಿಮ ಯಾತ್ರೆ ಮುಗಿಸಿ ಹುತಾತ್ಮ ಯೋಧನ ದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.

ಬೀಜಾಡಿ ಗ್ರಾಮದ ಮನೆಯಲ್ಲಿ ಅಂತಿಮ ವಿಧಿವಿಧಾನ ನಡೆಯಲಿದ್ದು, ಕುಟುಂಬದ ಆಪ್ತರಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರು ಕಲಿತ ಬೀಜಾಡಿಪಡು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಆಪ್ತರು, ಸಾರ್ವಜನಿಕರು, ಜನಪ್ರತಿನಿಧಿಗಳಿಗೆ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಬೀಜಾಡಿ ಕಡಲ ತೀರದಲ್ಲಿ ಅನೂಪ್ ಅಂತ್ಯಸಂಸ್ಕಾರ ನಡೆಯಲಿದೆ. ಸಮುದ್ರ ತೀರದ ಸರ್ಕಾರಿ ಜಮೀನಿನಲ್ಲಿ ಇದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಸಮುದ್ರ ತೀರದಲ್ಲಿ ಅನೂಪ್ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಲಾಗುವುದು. ಅಂತಿಮ ವಿಧಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಸೇನಾ ಸಿಬ್ಬಂದಿ ಭಾಗಿಯಾಗಲಿದ್ದಾರೆ.

ಜಮ್ಮುವಿನಿಂದ ಸೇನಾ ವಿಮಾನದಲ್ಲಿ ಬಂದ ಕುಂದಾಪುರದ ಅನೂಪ್ ಪೂಜಾರಿಯವರ ಪಾರ್ಥೀವ ಶರೀರಕ್ಕೆ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ವಿಮಾನ ನಿಲ್ದಾಣದಲ್ಲಿ ಅಂತಿಮ ನಮನ ಸಲ್ಲಿಸಿದರು. ಬೆಳಗಿನ ಜಾವ 2.30 ಕ್ಕೆ ಅನೂಪ್ ಪಾರ್ಥೀವ ಶರೀರ ಸರ್ಕಾರಿ ಗೌರವದೊಂದಿಗೆ ಹೊರಟಿದ್ದು ಜೊತೆಯಲ್ಲಿ ಕೋಟ ಶ್ರೀನಿವಾಸ್‌ ಪೂಜಾರಿ ಇದ್ದರು.


Delete Edit




 


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News