ಬಿವಿಟಿಯಲ್ಲಿ ಕೇಶವಿನ್ಯಾಸ, ಮೆಹಂದಿ ತರಬೇತಿಗೆ ಅರ್ಜಿ ಆಹ್ವಾನ

Update: 2023-09-26 14:05 GMT

ಮಣಿಪಾಲ, ಸೆ.26: ಮಣಿಪಾಲದ ಶಿವಳ್ಳಿಯಲ್ಲಿರುವ ಭಾರತೀಯ ವಿಕಾಸ ಟ್ರಸ್ಟ್ (ಬಿವಿಟಿ)ನಲ್ಲಿ ಅಕ್ಟೋಬರ್ 10ರಿಂದ ಒಂದು ವಾರದ ವಿವಿಧ ಶೈಲಿಯ ಬ್ರೈಡಲ್ ಸೀರೆ ಉಡುವ, ಕೇಶವಿನ್ಯಾಸ (ಹೇರ್‌ಸ್ಟೈಲ್) ಮತ್ತು ಮೆಹೆಂದಿ ಇಡುವ ಕುರಿತು ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಸ್ವ-ಉದ್ಯೋಗ ಮಾಡಲು ಆಸಕ್ತಿ ಇರುವ ಮಹಿಳೆಯರು/ ಯುವತಿ ಯರು ಈ ತರಬೇತಿಯ ಸದುಪಯೋಗವನ್ನು ಪಡೆದು ಕೊಳ್ಳಬಹುದು. 18 ರಿಂದ 40 ವರ್ಷದೊಳಗಿನ ಮಹಿಳೆಯರು, ಯುವತಿಯರು, ವಿದ್ಯಾರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಬಹುದು. ತರಬೇತಿ ಸಮಯದಲ್ಲಿ ಅಭ್ಯರ್ಥಿ ಗಳಿಗೆ ಉಚಿತ ಊಟದ ವ್ಯವಸ್ಥೆ ಇರುತ್ತದೆ.

ಅಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ವಿದ್ಯಾರ್ಹತೆಯನ್ನು ಬಿಳಿ ಹಾಳೆಯಲ್ಲಿ ಬರೆದು ಅ.4ರ ಒಳಗೆ ಭಾರತೀಯ ವಿಕಾಸ ಟ್ರಸ್ಟ್, ಅನಂತ, ಪೆರಂಪಳ್ಳಿ, ಅಂಬಾಗಿಲು ರಸ್ತೆ, ಕುಂಜಿಬೆಟ್ಟು ಅಂಚೆ, ಉಡುಪಿ - 576102 ಇಲ್ಲಿಗೆ ಕಳುಹಿಸಿಕೊಡಬಹುದು. ಅಥವಾ ಮೊಬೈಲ್ ಸಂಖ್ಯೆ: 8618498274, ದೂರವಾಣಿ ಸಂಖ್ಯೆ: 0820-2570263ನ್ನು ಸಂಪರ್ಕಿಸುವ ಮೂಲಕ ಭಾಗವಹಿಸುವಿಕೆಯನ್ನು ದೃಢೀಕರಿಸಬಹುದು ಎಂದು ಬಿವಿಟಿ ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News