‘ಮಹಾತ್ಮಗಾಂಧೀ ಸೇವಾ ಪ್ರಶಸ್ತಿ: ಕರ್ನಾಟಕ’ ಆಯ್ಕೆಗೆ ಅರ್ಜಿ ಆಹ್ವಾನ

Update: 2023-09-12 13:09 GMT

ಉಡುಪಿ, ಸೆ.12: ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂ.ನಗದನ್ನು ಒಳಗೊಂಡ ‘ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ’ಕ್ಕೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವಷರ್ ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾ ಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ಯನ್ನು ರಚಿಸಲಾಗುವುದು. 2023ರ ಅಕ್ಟೋಬರ್ 02ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮ ಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಪ್ರಶಸ್ತಿಗೆ ಹೆಸರನ್ನು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.

ಸೆಪ್ಟೆಂಬರ್ 15ರ ಒಳಗೆ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ವಿಳಾಸಕ್ಕೆ ಕಳುಹಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News