ಉಡುಪಿ ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2023-09-20 14:42 GMT

ಉಡುಪಿ, ಸೆ.20: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರ ಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾ ಗಿರಬೇಕು. ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆ ಗಳನ್ನು ಅಕ್ಟೋಬರ್ 1ರ ಒಳಗೆ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ, ದೂರವಾಣಿ ಸಂಖ್ಯೆ 0820-2574978 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News