ವಿಶೇಷ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Update: 2023-08-21 15:22 GMT

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟಲ್ - https://sevasindhu.karnataka.gov.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ. ಸಂಖ್ಯೆ:08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258- 231101 ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News