ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
Update: 2024-09-13 15:12 GMT
ಉಡುಪಿ: ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಹಜ್ ಭವನದಲ್ಲಿ ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಈ ತರಬೇತಿಗೆ ಅರ್ಹ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಗಳ 21 ರಿಂದ 35 ವರ್ಷದೊಳಗಿನ ಪದವಿ ಪಡೆದ ಅಭ್ಯರ್ಥಿಗಳಿಂದ ವೆಬ್‌ಸೈಟ್ - https://sevasindhu.karnataka.gov.in- ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 20ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.