ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2023-08-02 13:41 GMT

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿಷ ಇಲಾಖೆಯ ವತಿಯಿಂದ ‘ಆತ್ಮಯೋಜನೆ’ಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಕೃಷಿ ಚಟುವಟಿಕೆ ಗಳನ್ನು ಕೈಗೊಂಡಿರುವ, ಕನಿಷ್ಠ 1 ಎಕ್ರೆ ವಿಸ್ತೀರ್ಣದ ಸ್ವಂತ ಜಮೀನು ಹೊಂದಿರುವ ರೈತರು ಹಾಗೂ ರೈತ ಮಹಿಳೆಯರು ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News