ಕೋಟ್ಪಾ ದಳದಿಂದ ದಾಳಿ; ದಂಡ ವಸೂಲಿ

Update: 2023-10-10 15:18 GMT

ಉಡುಪಿ : ಉಡುಪಿ ತಾಲೂಕಿನಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಮಂದಾರ್ತಿ ಪರಿಸರದಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಒಟ್ಟು 22 ಪ್ರಕರಣ ದಾಖಲಿಸಿ 3600 ರೂ. ದಂಡ ವಸೂಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟ ಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಆರೋಗ್ಯ ನಿರೀಕ್ಷಣಾಧಿಕಾರಿ ರಕ್ಷಿತ್, ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ, ಬ್ರಹ್ಮಾವರ ಠಾಣೆಯ ಶಾಂಭವಿ, ರಂಜಿತ್ ಡಿ. ಹಾಗೂ ಎನ್‌ಟಿಸಿಪಿ ವಿಭಾಗದ ಸಾಮಾಜಿಕ ಕಾರ್ಯಕರ್ತೆ ಶೈಲಾ ಶ್ಯಾಮನೂರು ಹಾಗೂ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News