ಆ.29: ರಾಷ್ಟ್ರೀಯ ಕ್ರೀಡಾ ದಿನಾಚರಣೆ, ರಕ್ತದಾನ ಶಿಬಿರ

Update: 2024-08-28 14:45 GMT

ಉಡುಪಿ, ಆ.28: ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್, ಲಯನ್ಸ್ ಕ್ಲಬ್ ಮಿಡ್‌ಟೌನ್ ಉಡುಪಿ, ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ರೇಂಜರ್ಸ್ ವಿಭಾಗ, ರ್ಟ್ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್ ವಿಭಾಗ, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ಹಾಗೂ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಆ.29ರ ಗುರುವಾರ ಬೆಳಗ್ಗೆ 10 ಗಂಟೆಗೆ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪಿ.ಜಿ.ಎ. ಹಾಲ್‌ನಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಡಾ. ಜಿ.ಶಂಕರ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ ಎಸ್ ಶೆಟ್ಟಿ, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ರೆಡ್‌ಕ್ರಾಸ್ ಸೊಸೈಟಿ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಕುಂದಾಪುರ ರೆಡ್‌ಕ್ರಾಸ್ ಸೊಸೈಟಿಯ ಅಧ್ಯಕ್ಷ ಎಸ್ ಜಯಕರ ಶೆಟ್ಟಿ, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಸುಶಾನ್ ಶೆಟ್ಟಿ, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಮಚಂದ್ರ ಪಾಟ್ಕರ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News