ಆ.5: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಉಡುಪಿ, ಆ.4: ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಆ.5ರ ಶನಿವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಶನಿವಾರ ಬೆಳಗ್ಗೆ 10:30ಕ್ಕೆ ಬ್ರಹ್ಮಾವರದ ಬಂಟರ ಭವನದಲ್ಲಿ ನೂತನವಾಗಿ ಸೃಜಿಸಲ್ಪಟ್ಟ ಬ್ರಹ್ಮಾವರ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭ, ಅಪರಾಹ್ನ 12:30ಕ್ಕೆ ಮಣಿಪಾಲದ ಜಿಲ್ಲಾಧಿ ಕಾರಿಗಳ ಕಚೇರಿ ಸಭಾಂಗಣದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಪ್ರವಾಸೋದ್ಯಮ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ.
3 ಗಂಟೆಗೆ ಕುಂಜಿಬೆಟ್ಟು ಕೆಪಿಟಿಸಿಎಲ್ ನೌಕರರ ಸಭಾಭವನದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡುವ ಕಾರ್ಯ ಕ್ರಮದಲ್ಲಿ ಭಾಗವಹಿಸುವ ಸಚಿವರು ಬಳಿಕ ರಸ್ತೆ ಮಾರ್ಗವಾಗಿ ಕುಂದಾಪುರ, ಬೈಂದೂರು, ಭಟ್ಕಳ, ಕುಮಟಾ, ಶಿರಸಿ, ಹುಬ್ಬಳ್ಳಿ ಮೂಲಕ ಬೆಳಗಾವಿಗೆ ತೆರಳಲಿದ್ದಾರೆ.
ಉಡುಪಿಗೆ ಕಾನೂನು ಸಚಿವರು: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್ ಅವರು ಆ.5ರಂದು ಬೆಳಗ್ಗೆ 10:30ಕ್ಕೆ ಬಹ್ಮಾವರದ ಭಂಟರ ಭವನದಲ್ಲಿ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಅಪರಾಹ್ನ 3:30ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ, 4:30ಕ್ಕೆ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದಲ್ಲಿ ಮಾನವ ಹಕ್ಕುಗಳ ಸಂರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷರೊಂದಿಗೆ ಸಭೆಯಲ್ಲಿ ಪಾಲ್ಗೊಂಡು ಸಂಜೆ 7:30ಕ್ಕೆ ಉಡುಪಿಯಿಂದ ಮಂಗಳೂರಿಗೆ ತೆರಳುವರು.