ಮದ್ಯ ವ್ಯಸನಿ ಪಾಲಕರ ಮಕ್ಕಳ ಜಾಗೃತಿ ಸಪ್ತಾಹ ಉದ್ಘಾಟನೆ

Update: 2025-02-09 20:57 IST
ಮದ್ಯ ವ್ಯಸನಿ ಪಾಲಕರ ಮಕ್ಕಳ ಜಾಗೃತಿ ಸಪ್ತಾಹ ಉದ್ಘಾಟನೆ
  • whatsapp icon

ಉಡುಪಿ: ಮುಂಬೈ ಕಮಲ್ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್, ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್ ಮಣಿಪಾಲ, ಭಾರತೀಯ ವೈದ್ಯಕೀಯ ಮಂಡಳಿ ಉಡುಪಿ ಕರಾವಳಿ, ಒನ್ ಗುಡ್ ಸ್ಟೆಪ್ ಬೆಂಗಳೂರು ಹಾಗೂ ಯಕ್ಷಗಾನ ಕಲಾ ರಂಗದ ಸಂಯುಕ್ತ ಆಶ್ರಯದಲ್ಲಿ ಮದ್ಯ ವ್ಯಸನಿ ಪಾಲಕರ ಮಕ್ಕಳ ಜಾಗೃತಿ ಸಪ್ತಾಹ ಹಾಗೂ ನವಜೀವನ ಲೆ ಕೌನ್ಸೀಲರ್‌ಗಳ ೫ನೆ ಬ್ಯಾಚ್‌ನ ಉದ್ಘಾಟನಾ ಕಾರ್ಯಕ್ರಮ ಇಂದು ಆಸ್ಪತ್ರೆಯ ಕಮಲ್ ಎ ಬಾಳಿಗಾ ಸಭಾಂಗಣದಲ್ಲಿ ಜರಗಿತು.

ಅಭಿಯಾನವನ್ನು ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ.ರಾಜಲಕ್ಷ್ಮಿ, ಉದ್ಘಾಟಿಸಿ, ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಉಡುಪಿ ಡಾ.ಎ.ವಿ. ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ವಹಿಸಿದ್ದರು. ಅತಿಥಿಗಳಾಗಿ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಅಧ್ಯಕ್ಷ ಡಾ.ಸುರೇಶ್ ಶೆಣೈ, ಮಣಿಪಾಲ ರೋಟರಿ ಕ್ಲಬ್ ಉಪಾಧ್ಯಕ್ಷೆ ಶಶಿಕಲಾ ರಾಜವರ್ಮ, ಒನ್ ಗುಡ್ ಸ್ಟೆಪ್ ಸಂಸ್ಥಾಪಕಿ ಅಮಿತಾ ಪೈ ಮಾತನಾಡಿದರು.

ಆಸ್ಪತ್ರೆಯ ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ, ಫಿಸಿಯೋ ಥೆರಫಿಸ್ಟ್ ಡಾ.ದೀಪಿಕಾ, ರೋಟರಿ ಕ್ಲಬ್ ಕಾರ್ಯದರ್ಶಿ ಫರೀದಾ ಉಪಸ್ಥಿತರಿದ್ದರು. ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಸ್ವಾಗತಿಸಿದರು. ಆಪ್ತ ಸಮಾಲೋಚಕಿ ದೀಪಾಶ್ರೀ ವಂದಿಸಿದರು. ವಿಶ್ವೇಶ್ವರ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News