ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್‌ ಪ್ಯಾರಿಸ್ ವಿಗ್ರಹಗಳ ವಿಸರ್ಜನೆ ನಿಷೇಧ

Update: 2023-09-16 22:04 IST
ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್‌ ಪ್ಯಾರಿಸ್ ವಿಗ್ರಹಗಳ ವಿಸರ್ಜನೆ ನಿಷೇಧ

ಸಾಂದರ್ಭಿಕ ಚಿತ್ರ

  • whatsapp icon

ಉಡುಪಿ, ಸೆ.16: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆರೆ, ಬಾವಿ, ನದಿ, ಕಾಲುವೆ ಹಾಗೂ ಇತರೇ ಜಲಮೂಲ ಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿರುವ ಹಾಗೂ ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವು ದನ್ನು ನಿಷೇಧಿಸಿ, ಅಧಿಸೂಚನೆ ಹೊರಡಿಸಿದೆ.

ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಸಂದರ್ಭ ಗಣೇಶೋತ್ಸವ ಸಮಿತಿ ಗಳಿಗೆ ಅನುಮತಿ ನೀಡುವ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿರುವ ಗಣೇಶ ವಿಗ್ರಹಗಳನ್ನು ಬಳಸದೇ ಪರಿಸರ ಸಹ್ಯ ಗಣೇಶ ವಿಗ್ರಹಗಳನ್ನು ಮಾತ್ರ ಬಳಸುವಂತೆ ಮುಚ್ಚಳಿಕೆ ಪತ್ರವನ್ನು ಗಣೇಶೋತ್ಸವ ಸಮಿತಿ ಆಯೋಜಕರಿಂದ ಪಡೆದು ಅನುಮತಿ ನೀಡಬೇಕು. ಹಾಗೂ ಈ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಉಚ್ಛ ನ್ಯಾಯಾಲಯದ 2017ರ ಆದೇಶದಂತೆ ಕಠಿಣ ಕಾನೂನು ಕ್ರಮ ಕೈಗೊ ಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News