ಭಾರತ ಜೋಡೋ ವಾರ್ಷಿಕೋತ್ಸವ: ಕಾಂಗ್ರೆಸ್‌ನಿಂದ ಪಾದಯಾತ್ರೆ
ಉಡುಪಿ, ಸೆ.7: ಐತಿಹಾಸಿಕ ಭಾರತ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರು ವಾರ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬ್ರಹ್ಮಗಿರಿ ಕಾಂಗ್ರೆಸ್ ಭವನದಿಂದ ಹೊರಟ ಪಾದಯಾತ್ರೆಯು ಬ್ರಹ್ಮಗಿರಿ ಸರ್ಕಲ್ ಮೂಲಕ ಅಜ್ಜರಕಾಡು ಮಾರ್ಗವಾಗಿ ಜೋಡುಕಟ್ಟೆಯಲ್ಲಿ ಸಮಾಪ್ತಿ ಗೊಂಡಿತು. ಅಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಉಪಾಧ್ಯಕ್ಷ ಅಭಯ ಚಂದ್ರ ಜೈನ್ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ಉದಯ ಕುಮಾರ್ ಶೆಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ, ವರೋನಿಕ ಕರ್ನೆಲಿಯೋ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಹರಿಪ್ರಸಾದ್ ಶೆಟ್ಟಿ, ಸಂತೋಷ್ ಕುಲಾಲ್, ಶಂಕರ್ ಕುಂದರ್, ನವೀನ್ ಚಂದ್ರ ಸುವರ್ಣ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕುಶಲ್ ಶೆಟ್ಟಿ, ನರಸಿಂಹಮೂರ್ತಿ, ನಾಗೇಶ್ ಉದ್ಯಾವರ, ಭಾಸ್ಕರ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ, ಮಹಾಬಲ ಕುಂದರ್, ಪ್ರಶಾಂತ್ ಜತ್ತನ್ನ, ಸತೀಶ್ ಕೊಡವೂರು, ಡಾ.ಸುನಿತಾ ಶೆಟ್ಟಿ, ರೋಶಿನಿ ಒಲಿವೇರಾ, ಮೀನಾಕ್ಷಿ ಮಾಧವ ಬನ್ನಂಜೆ, ನೀರೆ ಕೃಷ್ಣ ಶೆಟ್ಟಿ, ಹರೀಶ್ ಕಿಣಿ, ಅಮೃತ್ ಶೆಣೈ, ಕಿಶನ್ ಹೆಗ್ಡೆ, ದೀಪಕ್ ಕೋಟ್ಯಾನ್, ಶಬ್ಬಿರ್ ಅಹ್ಮದ್ ಮುಂತಾದವರು ಉಪಸ್ಥಿತರಿದ್ದರು.