ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು

Update: 2023-08-15 15:12 GMT

ಪಡುಬಿದ್ರಿ, ಆ.15: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪಡುಬಿದ್ರಿ ಬಾಲಗಣಪತಿ ದೇವಾಸ್ಥನ ರಸ್ತೆ ಸಮೀಪ ಆ.14ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ರವಿ ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿದ್ದ ಬೈಕ್, ಪಡುಬಿದ್ರಿ ಪೇಟೆಯ ಕಡೆಗೆ ನಡೆದುಕೊಂಡು ಬರುತ್ತಿದ್ದ ರವಿ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬೈಕ್ ಸವಾರ ಹಾಗೂ ರವಿ ರಸ್ತೆಗೆ ಬಿದ್ದು ಗಾಯಗೊಂಡರು. ಗಂಭೀರವಾಗಿ ಗಾಯಗೊಂಡ ರವಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟರು.

ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News