ನೈಋತ್ಯ ಪದವೀಧರ -ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಸಜ್ಜು: ಕುಯಿಲಾಡಿ

Update: 2023-10-11 13:21 GMT

ಉಡುಪಿ, ಅ.11: ಬೂತ್ ಸಶಸ್ತೀಕರಣದ ಸಭೆಗಳು ಎಲ್ಲ ಮಂಡಲಗಳಲ್ಲಿ ಯಶಸ್ವಿಯಾಗಿ ನಡೆದಿವೆ. ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಲು ಮಂಡಲ ಮಟ್ಟದ ಸಮಿತಿ ರಚನೆಯಾಗಿದೆ. ನೈಋತ್ಯ ಪದವೀಧರರ ಮತ್ತು ನೈಋತ್ಯ ಶಿಕ್ಷಕರ ಚುನಾ ವಣೆಗೆ ಬಿಜೆಪಿ ಸನ್ನದ್ಧವಾಗಿದೆ. ಕ್ಷೇತ್ರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನದ ಮೂಲಕ ಗೆಲುವಿಗೆ ಎಲ್ಲರೂ ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಇಂದು ನಡೆದ ನೈಋತ್ಯ ಪದವೀಧರರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ನೈಋತ್ಯ ಪದವೀಧರರ ಮತ್ತು ನೈಋತ್ಯ ಶಿಕ್ಷಕರ ಚುನಾವಣೆ ನಿರ್ವಹಣೆಯ ಜಿಲ್ಲಾ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ ಮಾತನಾಡಿ, , 2020ರ ನ.1ರೊಳಗೆ ಪದವಿ ಹೊಂದಿರುವ ಪದವೀಧರರನ್ನು ಪದವೀಧರ ಕ್ಷೇತ್ರದ ಮತ್ತು ಹೈಸ್ಕೂಲ್ ಮೇಲ್ಪಟ್ಟ ವಿದ್ಯಾ ಸಂಸ್ಥೆಗಳಲ್ಲಿ ಕನಿಷ್ಠ 6 ವರ್ಷಗಳ ಸೇವೆ ಸಲ್ಲಿಸಿರುವ ಶಿಕ್ಷಕರನ್ನು ಶಿಕ್ಷಕರ ಕ್ಷೇತ್ರದ ಮತದಾ ರರ ಪಟ್ಟಿಗೆ ನ.6ರ ಮೊದಲು ಸೇರ್ಪಡೆ ಗೊಳ್ಳಬೇಕು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸೇವಾ ಪಾಕ್ಷಿಕ ಅಭಿಯಾನದ ಜಿಲ್ಲಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮಾತನಾಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ಮುಖಂಡರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಹೇಶ್ ಠಾಕೂರ್, ರವಿ ಅಮೀನ್, ಶ್ರೀಶ ನಾಯಕ್, ಕಿಶೋರ್ ಕುಮಾರ್ ಕುಂದಾಪುರ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ.ಸುವರ್ಣ, ಉಮೇಶ್ ನಾಯ್ಕ್, ಅಂಡಾರು ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News