ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧೆ: ಇಬ್ಬರು ಬಿಜೆಪಿ ಮುಖಂಡರ ಉಚ್ಛಾಟನೆ

Update: 2025-04-21 15:23 IST
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧೆ: ಇಬ್ಬರು ಬಿಜೆಪಿ ಮುಖಂಡರ ಉಚ್ಛಾಟನೆ

ಕಮಲಾಕ್ಷ ಹೆಬ್ಬಾರ್/ಉದಯ ಕೋಟ್ಯಾನ್

  • whatsapp icon

ಉಡುಪಿ : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್)ದ ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಸ್ಪರ್ಧಿಸುತ್ತಿರುವ ಇಬ್ಬರು ಬಿಜೆಪಿ ಮುಖಂಡರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉದಯ ಕೋಟ್ಯಾನ್ ಹಾಗೂ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News