ಬಿಜೆಪಿಯ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

Update: 2023-09-24 14:46 GMT

ಉಡುಪಿ, ಸೆ.24: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ರವಿವಾರ ಚಾಲನೆ ನೀಡಿದ್ದಾರೆ.

ಕಡಿಯಾಳಿ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ದೇಗುಲದ ಬಳಿ ಮಣ್ಣು ಸಂಗ್ರಹಿಸಿ ಅಮೃತ ಕಲಶಗಳಲ್ಲಿರಿಸಿ ಕಡಿಯಾಳಿ ದೇವಸ್ಥಾನದಿಂದ ಬಿಜೆಪಿ ಜಿಲ್ಲಾ ಕಚೇರಿವರೆಗೆ ಮೆರವಣಿಗೆಯಲ್ಲಿ ಮೂಲಕ ತರಲಾಯಿತು. ಮಣ್ಣನ್ನು ತುಂಬಿರುವ ಅಮೃತ ಕಲಶಗಳನ್ನು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರಿಗೆ ಹಸ್ತಾಂತರಿಸಲಾಯಿತು.

ಅ.13ರೊಳಗೆ ಗ್ರಾಪಂ ವ್ಯಾಪ್ತಿಯಲ್ಲಿ ಆಯೋಜಿಸುವ ಮೂಲಕ ಗ್ರಾಮದಲ್ಲಿ ಸಂಗ್ರಹಿಸಿದ ಮಣ್ಣನ್ನು ಮಂಡಲಗಳ ಮೂಲಕ ಜಿಲ್ಲೆ ಬಿಜೆಪಿ ಕಚೇರಿಗೆ ತಲುಪಿಸಲು ಸೂಚಿಸಲಾಯಿತು.

ಉಡುಪಿ ಶಾಸಕರಾದ ಯಶಪಾಲ್ ಎ.ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಿರಣ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಮುಖಂಡರಾದ ಗೀತಾಂಜಲಿ ಸುವರ್ಣ, ವೀಣಾ ಎಸ್.ಶೆಟ್ಟಿ, ಶ್ಯಾಮಲಾ ಕುಂದರ್, ಕುತ್ಯಾರು ನವೀನ್ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮನೋಹರ್ ಎಸ್.ಕಲ್ಮಾಡಿ, ಸದಾನಂದ ಉಪ್ಪಿನ ಕುದ್ರು, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಪ್ರತಾಪ್‌ಶೆಟ್ಟಿ ಚೇರ್ಕಾಡಿ, ರಾಘವೇಂದ್ರ ಉಪ್ಪೂರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್, ದಾವೂದ್ ಅಬೂಬಕ್ಕರ್, ಆಲ್ವಿನ್ ಡಿಸೋಜ, ಅಭಿಯಾನದ ಸಂಯೋಜಕ ಸುಪ್ರಸಾದ್ ಶೆಟ್ಟಿ ಬೈಕಾಡಿ, ಸಹ ಸಂಚಾಲಕ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News