ನೈಋತ್ಯ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಿ.ಟಿ.ರವಿ

Update: 2023-09-16 15:19 GMT

ಉಡುಪಿ, ಸೆ.16: ಮುಂಬರಲಿರುವ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಉಡುಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಇಂದು ನಡೆದ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರ ಚುನಾವಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಈ ಚುನಾವಣೆಯು ಪಕ್ಷಾಧಾರಿತ ಚುನಾವಣೆಯಾಗಿದ್ದು ಪಕ್ಷದ ವಿಚಾರಧಾರೆ ಇರುವವರನ್ನು ಗರಿಷ್ಠ ಸಂಖ್ಯೆಯಲ್ಲಿ ನೊಂದಾಯಿಸುವ ಜೊತೆಗೆ ನಕಲಿ ಮತದಾರರ ಸೇರ್ಪಡೆಯಾಗದಂತೆ ನಿಗಾ ವಹಿಸಬೇಕು. ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೆ ನ.6 ಕೊನೆಯ ದಿನವಾಗಿದ್ದು, ಜವಾಬ್ದಾರಿ ಹೊಂದಿರುವ ತಂಡದ ಜೊತೆಗೆ ಪಕ್ಷದ ವಿವಿಧ ಸ್ತರದ ಪದಾಧಿಕಾರಿ ಗಳು ಹಾಗೂ ಕಾರ್ಯ ಕರ್ತರು ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಚುನಾವಣೆಯ ಪೂರ್ಣ ಪ್ರಮಾಣದ ಗೆಲುವಿಗೆ ಸಂಘಟಿತರಾಗಿ ತೊಡಗಿಸಿ ಕೊಳ್ಳಬೇಕು ಎಂದು ಕರೆ ನೀಡಿದರು.

ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಶಾಸಕರಾದ ವಿ.ಸುನೀಲ್ ಕುಮಾರ್, ಯಶ್ಪಾಲ್ ಎ.ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಪ್ರಮೋದ್ ಮಧ್ವರಾಜ್, ಲಾಲಾಜಿ ಆರ್. ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಗೀತಾಂಜಲಿ ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News