ಬೋರ್ಡ್ ಆಫ್ ಇಸ್ಲಾಮಿಕ್ ಪರೀಕ್ಷೆಯ ಪ್ರತಿಭಾನ್ವಿತರಿಗೆ ಸನ್ಮಾನ

Update: 2023-08-09 12:26 GMT

ಉಡುಪಿ, ಆ.9: ತೋನ್ಸೆ ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಜರಗಿದ ಬೋರ್ಡ್ ಆಫ್ ಇಸ್ಲಾಮಿಕ್ ಪಬ್ಲಿಕ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿ ಸುವ ಕಾರ್ಯಕ್ರಮ ಇತ್ತೀಚೆಗೆ ಜರಗಿತು.

ಪ್ರತಿಭಾನ್ವಿತರಿಗೆ ಪ್ರಶಸ್ತಿ ಪ್ರದಾನ ಮಾಡಿದ ಜಮಾಅತೇ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಮಾತನಾಡಿ, ಪ್ರಸಕ್ತ ಸನ್ನಿವೇಶದಲ್ಲಿ ಲೌಕಿಕ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಗಳು ಇಂತಹ ವಿಷಯಗಳ ಕುರಿತು ಅಧ್ಯಯನ ಮಾಡುವುದು ಕೂಡ ಮುಖ್ಯವಾಗಿರುತ್ತದೆ ಎಂದು ಹೇಳಿದರು.

ವೇದಿಕೆಯಲ್ಲಿ ಜಮಾಅತೇ ಇಸ್ಲಾಮಿ ಹಿಂದ್ ಹೂಡೆ ಘಟಕದ ಅಧ್ಯಕ್ಷ ಅಬ್ದುಲ್ ಖಾದಿರ್, ಹಿರಿಯ ಟ್ರಸ್ಟಿ ಮೌಲಾನಾ ಆದಂ ಸಾಹೇಬ್, ಸ್ಥಳೀಯ ಗ್ರಾಪಂ ಸದಸ್ಯೆ ಜಮೀಲಾ ಸದೀದಾ, ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಇಸ್ಲಾಮಿಕ್ ಎಚ್‌ಓಡಿ ಶಾಹಿದ್ ಮೌಲಾನಾ ಉಪಸ್ಥಿತರಿದ್ದರು.

ಶಿಕ್ಷಕಿ ಖಾಜಿ ಆಫ್ರೀನ್ ಕಿರಾತ್ ಪಠಿಸಿದರು. ಜಾಮಿಯ ಪ್ರಾಂಶುಪಾಲ ಡಾ.ಕುಲ್ಸುಮ್ ಅಬೂಬಕರ್ ಸ್ವಾಗತಿಸಿದರು. ಝಕಿಯಾ ವಂದಿಸಿದರು. ಶಿಕ್ಷಕಿ ಮುಸರತ ಕಾರ್ಯಕ್ರಮ ನಿರ್ವಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News