ಬೈಂದೂರು: ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

Update: 2024-08-25 17:25 GMT

ಸಾಂದರ್ಭಿಕ ಚಿತ್ರ 

ಬೈಂದೂರು: ಹೊಳೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಲ್ತೋಡು ಗ್ರಾಮದ ಗುಂಡುವಾಣ ಎಂಬಲ್ಲಿ ಆ.25ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಸೋಮ(66) ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದ ಗುಂಡು ವಾಣ ಹೊಳೆಗೆ ಬರ್ಹಿದೆಸೆಗೆ ಹೋಗಿದ್ದು, ಈ ವೇಳೆ ತುಂಬಿ ಹರಿಯುತ್ತಿರುವ ಹೊಳೆಯ ನೀರಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನ ರಭಸಕ್ಕೆ ಕೊಚ್ಚಿ ಕೊಂಡು ಹೋಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News