ಬೈಂದೂರು | ಅಕ್ರಮ ಪಟಾಕಿ ದಾಸ್ತಾನು ಪತ್ತೆ: 4 ಲಕ್ಷ ರೂ. ಮೌಲ್ಯದ ಪಟಾಕಿ ವಶ

Update: 2024-10-10 05:59 GMT
ಸಾಂದರ್ಭಿಕ ಚಿತ್ರ (source: PTI)

ಕುಂದಾಪುರ: ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಆರೋಪದಲ್ಲಿ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು 4 ಲಕ್ಷ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.

ಉಪ್ಪುಂದದ ಕಂಚಿಕಾನ್ ಎಂಬಲ್ಲಿನ ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿ.

ದತ್ತಾತ್ರೇಯ ಶೇಟ್ ಈ ಹಿಂದಿನಿಂದಲೂ ದೀಪಾವಳಿ ಹಾಗೂ ಚೌತಿ ಹಬ್ಬದ ಸಂದರ್ಭ ಪಟಾಕಿ ಮಾರಾಟ ಮಾಡುತ್ತಿದ್ದರು. ಇವರು ಪಟಾಕಿ ಅಕ್ರಮ ದಾಸ್ತಾನು ಇಟ್ಟಿರುವುದರ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಬುಧವಾರ ತಪಾಸಣೆ ನಡೆಸಿದಾಗ ವಿವಿಧ ಬಗೆಯ ಸುಡುಮದ್ದುಗಳು, ಜಿಲೆಟಿನ್ ಕಡ್ಡಿಗಳು ಮೊದಲಾದ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ ಎನ್ನಲಾಗಿದೆ. ಸುಮಾರು ನಾಲ್ಕು ಲಕ್ಷ ರೂ.ಗೂ. ಅಧಿಕ ಮೌಲ್ಯದ ಪಟಾಕಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News