ಮಣಿಪಾಲ | ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ಆರೋಪ; ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

Update: 2025-03-31 19:41 IST
ಮಣಿಪಾಲ | ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ಆರೋಪ; ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು
  • whatsapp icon

ಮಣಿಪಾಲ: ಸಾರ್ವಜನಿಕವಾಗಿ ಸುಮಂತ್ ಎಂಬವರೊಂದಿಗೆ ಮಾ.27ರಂದು ಅಸಭ್ಯವಾಗಿ ವರ್ತಿಸಿದ ಪೊಲೀಸ್ ಕಾನ್‌ಸ್ಟೇಬಲ್ ಶರಣ ಬಸವ ಎಂಬವರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದೆ.

ಈ ವಿಷಯವನ್ನು ಸುಮಂತ್ ಅವರು ಪೊಲೀಸ್ ಇಲಾಖೆಯ ಗಮನಕ್ಕೆ ತಂದಿದ್ದು, ಯಾವುದೇ ದೂರು ಬೇಡ ಎಂದು ತಿಳಿಸಿದ್ದರೂ, ಪೊಲೀಸ್ ಇಲಾಖೆ ಸ್ವಯಂ ಪ್ರೇರಿತವಾಗಿ ಪೊಲೀಸ್ ಕಾನ್‌ಸ್ಟೇಬಲ್ ಶರಣ ಬಸವ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 92(0) ಮತ್ತು (ಆರ್)ರಂತ ಪ್ರಕರಣ ದಾಖಲಿಸಿಕೊಂಡಿದೆ. ಹಾಗೂ ಈ ಬಗ್ಗೆ ಸೂಕ್ತ ಇಲಾಖಾ ವಿಚಾರಣೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News