ಕುಂದಾಪುರ: ತಿರುಪತಿಗೆ ದರ್ಶನಕ್ಕೆ ತೆರಳಿದ್ದಾಗ ಮನೆಯಲ್ಲಿ ನಗ-ನಗದು ಕಳವು

Update: 2023-10-08 05:49 GMT

ಕುಂದಾಪುರ, ಅ.8: ತಿರುಪತಿ ಯಾತ್ರೆಗೆ ಮನೆಮಂದಿ ತೆರಳಿದ್ದ ವೇಳೆ ಮನೆಯಲ್ಲಿ ಕಳ್ಳತನ ನಡೆದ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಜನ್ಸಾಲೆ ಎಂಬಲ್ಲಿ ವರದಿಯಾಗಿದೆ.

ಇಲ್ಲಿನ ಸುಕನ್ಯಾ ಕಿಣಿ ಎಂಬವರು ಗುರುವಾರ ತಿರುಪತಿ ದರ್ಶನಕ್ಕೆಂದು ತೆರಳಿದ್ದರು. ಇಂದು ಮುಂಜಾನೆ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಕುಂದಾಪುರ-ಸಿದ್ದಾಪುರ ಮುಖ್ಯ ರಸ್ತೆ ಸಮೀಪದಲ್ಲೇ ಸುಕನ್ಯಾರ ಮನೆಯಿದ್ದು ತಿರುಪತಿ ದರ್ಶನ ಮುಗಿಸಿ ಬೆಳಗ್ಗೆ ಬಂದಾಗ ಮನೆಯ ಮುಖ್ಯ ದ್ವಾರದ ಬೀಗ ಒಡೆದು ಬಾವಿಗೆ ಎಸೆದಿರುವುದು ತಿಳಿದುಬಂದಿದೆ. ಮನೆಯ ಒಳಗಿನ ಕಪಾಟಿನಲ್ಲಿದ್ದ 5 ಪವನ್ ತೂಕದ ಮುತ್ತಿನ ಹವಳ ಮಿಶ್ರಿತ ಚಿನ್ನ, ಒಂದು ಪವನ್ ಚಿನ್ನದ ನಾಣ್ಯ, ಹತ್ತು ಸಾವಿರ ರೂ. ನಗದು ಹಾಗೂ ಬೆಳ್ಳಿ ಸಾಮಗ್ರಿಗಳು ಕಳವಾಗಿರುವುದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಶಂಕರನಾರಾಯಣ ಠಾಣೆ ಉಪನಿರೀಕ್ಷಕ ನಾಸಿರ್ ಹುಸೇನ್ ಹಾಗೂ ಸಿಬ್ಬಂದಿ, ಬೆರಳಚ್ಚು ತಜ್ಙರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News