ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ನಗ ನಗದು ಕಳವು

Update: 2023-10-24 16:09 GMT

ಬ್ರಹ್ಮಾವರ, ಅ.24: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವಾಗಿರುವ ಬಗ್ಗೆ ವರದಿಯಾಗಿದೆ.

ಸಾಗರ್ ಎಂಬವರು ಅ.5ರಂದು ಮಹಾರಾಷ್ಟ್ರದ ಪನ್ವೇಲ್- ಮಂಗಳೂರು ನೇತ್ರಾವತಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದು, ಬಾರಕೂರು ರೈಲ್ವೆ ನಿಲ್ದಾಣದಿಂದ ಉಡುಪಿ ರೈಲ್ವೆ ನಿಲ್ದಾಣದ ಮಧ್ಯೆ ಪ್ರಯಾಣಿಸುತ್ತಿದ್ದ ವೇಳೆ ಕಳ್ಳರು ಸಾಗರ್ ಬಳಿ ಇದ್ದ 3.5 ಲಕ್ಷ ಹಾಗೂ 20 ಗ್ರಾಂ ತೂಕದ 2 ಚಿನ್ನದ ಉಂಗುರವನ್ನು ಕಳವು ಮಾಡಿಕೊಂಡು ಹೋಗಿದ್ದಾರೆಂದು ದೂರಲಾಗಿದೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ 4,70,000ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News