ಸೀತಾನದಿಯಲ್ಲಿ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2024-08-15 15:01 GMT

ಬ್ರಹ್ಮಾವರ : ಸೀತಾನದಿಯಲ್ಲಿ ಕಯಕಿಂಗ್ ಮೂಲಕ ಪ್ರಕೃತಿ ವಿಸ್ಮಯಗಳನ್ನು ತೋರಿಸಿ ಜನರಲ್ಲಿ ಪ್ರಕೃತಿ ಪ್ರೇಮವನ್ನು ಬಿತ್ತುವ ಕೆಲಸ ಮಾಡುತ್ತಿರುವ ಸಾಲಿಗ್ರಾಮ ಕಯಾಕಿಂಗ್ ತಂಡ ೭೮ನೇ ವರ್ಷದ ಸ್ವಾತಂತ್ರ್ಯ ದಿನವನ್ನು ವಿಭಿನ್ನವಾಗಿ ಆಚರಿಸಿದೆ.

ತಂಡ ಈ ಬಾರಿ ನದಿಯ ಮದ್ಯದಲ್ಲಿ ಕಾಂಡ್ಲಾ ಮರದ ನಡುವೆ ಕಾಂಡ್ಲಾ ನಡಿಗೆ ಸೇತುವೆ ರಚಿಸಿ ಧ್ವಜಾರೋಹಣ ಮಾಡಿ ಅನ್ನವಿತ್ತ ಪ್ರಕೃತಿಯಲ್ಲಿ ರಾಷ್ಟ್ರಪ್ರೇಮವನ್ನು ಉತ್ತೇಜಿಸುವ ಪ್ರಯತ್ನ ಮಾಡಿದೆ. ಉದ್ಯಮಿ ಪ್ರಮೋದ್ ಮದ್ವರಾಜ್ ಧ್ವಜಾರೋಹಣಗೈದು ಮಾತನಾಡಿದರು.

ಸಾಲಿಗ್ರಾಮ ಕಯಾಕಿಂಗ್‌ನ ಮುಖ್ಯಸ್ಥರಾದ ಮಿಥುನ್ ಕುಮಾರ್ ಮೆಂಡನ್ ಲೋಕೇಶ್ ಮತ್ತಿತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News