ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸದಂತೆ ಒತ್ತಾಯ

Update: 2023-07-18 15:17 GMT

ಉಡುಪಿ: ಸಾಮಾಜಿಕ ಸಹಬಾಳ್ವೆಯ ಪರಂಪರೆಗೆ ಧಕ್ಕೆ ತರುವ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ ಕಾರ್ಯಕ್ರಮಗಳಿಗೆ ಕುಂದಾಪುರದ ಶಿಕ್ಷಣ ಸಂಸ್ಥೆಗಳಲ್ಲಿ ನಡೆಸಲು ಅವಕಾಶ ನೀಡಬಾರದು ಎಂದು ಸಂಚಾಲಕ ರಾಜೇಶ್ ವಡೇರಹೋಬಳಿ ಒತ್ತಾಯಿಸಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಕೋಮು ದ್ವೇಷದ ಭಾಷಣಗಳನ್ನು ಮಾಡಿ ರಾಜ್ಯದ ಸೌಹಾರ್ದ ಪರಂಪರೆಗೆ ಧಕ್ಕೆ ತರುತ್ತಿದ್ದಾರೆ. ಅವರ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹಿಂದೊಮ್ಮೆ ಅವರ ಸ್ವಂತ ಊರಿರುವ ಉತ್ತರ ಕನ್ನಡ ಜಿಲ್ಲೆಗೆ ಕಾಲಿಡದಂತೆ ಜಿಲ್ಲಾಡಳಿತ ಆಜ್ಞೆ ಹೊರಡಿಸಿತ್ತು. ಇಂತಹ ಹಿನ್ನೆಲೆ ಇರುವ ವ್ಯಕ್ತಿಯ ಭಾಷಣವನ್ನು ಕುಂದಾಪುರದ ಯುವ ಬ್ರಿಗೇಡ್ ಆಯೋಜಿಸಿದೆ.

ಸೂಲಿಬೆಲೆಯವರು ನೇರವಾಗಿ ಹೇಳದಿದ್ದರೂ ಒಂದು ರಾಜಕೀಯ ಪಕ್ಷದ ಸಕ್ರಿಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ. ಪ್ರಜಾಪ್ರಭುತ್ವ ದೇಶದಲ್ಲಿ ಎಲ್ಲರಿಗೂ ಅವರವರು ನಂಬಿದ ರಾಜಕೀಯ ಪಕ್ಷದ ಧೋರಣೆಗಳನ್ನು ಪ್ರಚಾರ ಮಾಡುವ ಹಕ್ಕಿದೆ. ಆದರೆ ಯುವ ಮನಸ್ಸುಗಳೇ ಹೆಚ್ಚಿರುವ ಕಾಲೇಜಿನ ಆವರಣ ದಲ್ಲಿ ಈ ಕಾರ್ಯಕ್ರಮಕ್ಕೆ ಸ್ಥಳಾವಕಾಶ ಮಾಡಿರುವುದು ಆತಂಕ ಮತ್ತು ಬೇಸರವನ್ನು ಉಂಟುಮಾಡಿದೆ. ಅದೇ ಕಾಲೇಜಿನಲ್ಲಿ ಈ ಹಿಂದೆ ಮತೀಯ ದ್ವೇಷದ ವಿವಾದಗಳನ್ನು ಸೃಷ್ಟಿಸಿ, ಹಲವಾರು ಹೆಣ್ಣು ಮಕ್ಕಳು ತಮ್ಮ ವ್ಯಾಸಂಗ ವನ್ನು ನಿಲ್ಲಿಸಿದ್ದಾರೆ ಎಂದು ಸಮಿತಿ ಸಂಚಾಲಕ ರಾಜೇಶ್ ವಡೇರಹೋಬಳಿ ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News