ಪ್ರವೀಣ್ ಕುಮಾರ್ ಶೆಟ್ಟಿಗೆ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
Update: 2024-09-04 12:13 GMT
ಹೆಬ್ರಿ : ನಿವೃತ್ತ ಶಿಕ್ಷಕ, ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ನಾಟಕಕಾರ ದಿವಂಗತ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಹೆಬ್ರಿ ಸರಕಾರಿ ಪ.ಪೂ. ಕಾಲೇಜಿನ ಪ್ರೌಢಶಾಲೆ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಹೆಬ್ರಿ ಎಸ್.ಆರ್. ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಸೆ.೫ರಂದು ಸಂಜೆ ೪ಗಂಟೆಗೆ ನಡೆಯುವ ಸಮಾರಂಭದಲ್ಲಿ ಮುದ್ರಾಡಿ ಗ್ರಾಪಂ ಸದಸ್ಯ ಸನತ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿರು ವರು. ಅಧ್ಯಕ್ಷತೆಯನ್ನು ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲ ವೀಣಾ ಯು.ಶೆಟ್ಟಿ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.